ಅಕ್ರಮವಾಗಿ ಜುಗಾರಿ ಅಡ್ಡೆಗೆ ದಾಳಿ        ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬಂಟ್ವಾಳ,ಜು.26. ಅಕ್ರಮವಾಗಿ ಮನೆಯೊಂದರಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ . ಆರೋಪಿಗಳ ಸಹಿತ ಆಟಕ್ಕೆ ಬಳಸಿದ ಹಣ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ತಾಲೂಕಿನ ಪಿಲಿಮೊಗ್ರು ಗ್ರಾಮದ ನಡಾಯಿ ಎಂಬಲ್ಲಿ ನಡೆದಿದೆ.

ಬಂಧಿತ ಆರೋಪಿಗಳನ್ನು ಶಿವರಾಮ ನಾಯಕ್ (56), ಗೋಪಾಲ (41), ಯೋಗೀಶ ಪ್ರಭು, (46) ಎಂದು ಗುರುತಿಸಲಾಗಿದೆ. ಜಯಣ್ಣ ಅಲಿಯಾಸ್ ಜಯಚಂದ್ರ ಬೊಳ್ಳಾರ್ ಎಂಬಾತ ಪೊಲೀಸರ ಕೈಗೆ ಸಿಗದೆ ಪರಾರಿಯಾಗಿದ್ದಾನೆ ಎನ್ನಲಾಗಿದೆ.

 

 

 

Scroll to Top