ಮಂಗಳೂರು: ಕುಡಿದು ಮೋರಿಗೆ ಬಿದ್ದ ವ್ಯಕ್ತಿ;     ಮೇಲಕ್ಕೆತ್ತಿದ ಸಂಚಾರಿ ಪೊಲೀಸರು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ಕುಡುಕನೋರ್ವನನ್ನು ಸಂಚಾರಿ ಪೊಲೀಸರು ಮೇಲಕ್ಕೆತ್ತಿ ರಕ್ಷಣೆ ಮಾಡಿ ಘಟನೆ ಮಂಗಳೂರಿನ ಪಂಪ್‌ವೆಲ್ ಬಳಿ ಸಂಭವಿಸಿದೆ.ಮಳೆಯಿಂದಾಗಿ ಮೋರಿಯಲ್ಲಿ ನೀರು ರಭಸವಾಗಿ ಹರಿಯುತ್ತಿತ್ತು. ಸ್ವಲ್ಪ ಹೆಚ್ಚು ಕಮ್ಮಿ ಆದರೂ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋಗುವ ಸಾಧ್ಯತೆ ಇತ್ತು. ಇದನ್ನು ಗಮನಿಸಿದ ಪೊಲೀಸರು ಆತನನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ.

ಮಂಗಳೂರು ನಗರ ಜೆಪ್ಪಿನಮೊಗರು ಸಂಚಾರಿ ಠಾಣೆಯ ಹೆಡ್ ಕಾನ್‌ಸ್ಟೇಬಲ್ ತಿಪ್ಪೇಸ್ವಾಮಿ ಹಾಗೂ ಸಿಬ್ಬಂದಿ ವಿಲ್ಸನ್ ಫೆರ್ನಾಂಡಿಸ್ ಅವರು ಮೋರಿಗೆ ಇಳಿದು ವ್ಯಕ್ತಿಯನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಪೊಲೀಸರಿಗೆ ಸಾರ್ವಜನಿಕರು ಕೂಡ ಸಹಕರಿಸಿದ್ದಾರೆ.

Also Read  ಕರಾವಳಿಯಾದ್ಯಂತ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ

 

error: Content is protected !!
Scroll to Top