(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ರಾಜ್ಯಾದ್ಯಂತ ಮಾರ್ಷಲ್‌ಗಳನ್ನು ಒಳಗೊಂಡ ಕಾರ್ಯಪಡೆಗಳನ್ನು ರಚಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಹೇಳಿದರು.
ಪರಿಸರ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸಚಿವರು ಈ ನಿರ್ದೇಶನ ನೀಡಿದರು ಎನ್ನಲಾಗಿದೆ. ಎಲ್ಲಾ ಜಿಲ್ಲಾ ಕೇಂದ್ರದಲ್ಲೂ ತಂಡ ರಚಿಸಿ, ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳಾದ ಕ್ಯಾರಿಬ್ಯಾಗ್, ಚಮಚ, ತಟ್ಟೆ, ಲೋಟ ಇತ್ಯಾದಿ ತಯಾರಿಸುವ ಘಟಕಗಳು, ಗೋದಾಮು ಮತ್ತು ಮಾರಾಟ ಮಳಿಗೆಗಳ ಮೇಲೆ ನಿಗಾ ಇಟ್ಟು, ದಾಳಿ ನಡೆಸಿ ಪ್ರಕರಣ ದಾಖಲಿಸುವಂತೆ ಸೂಚಿಸಿದರು.
