ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ;     16 ಸದಸ್ಯರ ನೇಮಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿರುವ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯನ್ನು 3 ವರ್ಷಗಳ ಅವಧಿಗೆ ಪುನರ್ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎನ್ನಲಾಗಿದೆ. ಸಂರಕ್ಷಣಾ ವಿಶೇಷ ತಜ್ಞರು, ಜೀವಿಶಾಸ್ತ್ರಜ್ಞರು, ಪರಿಸರವಾದಿಗಳ ಕೋಟಾದಡಿಯಲ್ಲಿ ಸಚಿವರ, ಶಾಸಕರ ಮಕ್ಕಳನ್ನು ನೇಮಕ ಮಾಡಿಕೊಳ್ಳಲಾಗಿದೆ.

ಸಚಿವ ಎಂ.ಬಿ. ಪಾಟೀಲ್ ಪುತ್ರ ಧ್ರುವ್ ಎಂ ಪಾಟೀಲ್, ವಿನಯ್ ಕುಲಕರ್ಣಿ ಪುತ್ರಿ ವೈಶಾಲಿ ಕುಲಕರ್ಣಿ ಮಂಡಳಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ. ರಾಜ್ಯ ವನ್ಯಜೀವಿ ಮಂಡಳಿಗೆ ಸಿಎಂ ಅಧ್ಯಕ್ಷರಾಗಿರುತ್ತಾರೆ. ಅರಣ್ಯ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಸದ್ಯ ಈಗ ಶಾಸಕರ ಕೋಟಾದಡಿ 10 ಸದಸ್ಯರನ್ನ ನೇಮಕ ಮಾಡಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

Also Read  ಕಡಬದಲ್ಲಿ ಇಂದು ಶೂನ್ಯ ಕೊರೋನಾ

                       

 

 

error: Content is protected !!
Scroll to Top