ಹೇಮಾವತಿ ಪ್ರವಾಹದಿಂದ ಸಕಲೇಶಪುರ ಮುಳುಗಡೆ         ಜನಜೀವನ, ಸಂಚಾರ ಅಸ್ತವ್ಯಸ್ತ                

(ನ್ಯೂಸ್ ಕಡಬ)newskadaba.com ಹಾಸನ, ಜು.27. ಸಕಲೇಶಪುರ ಪಟ್ಟಣದ ಆಜಾದ್ ರಸ್ತೆಯಲ್ಲಿ ಹೇಮಾವತಿ ನದಿ ನೀರಿನಿಂದ ಸಂಪೂರ್ಣ ಜಲಾವೃತಗೊಂಡಿದ್ದರಿಂದ ನಿವಾಸಿಗಳು ಹಾಗೂ ಅಂಗಡಿ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರವಾಹದಲ್ಲಿ ಸಿಲುಕಿರುವ ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲು ತಾಲೂಕು ಆಡಳಿತ ಕ್ರಮ ಕೈಗೊಳ್ಳುತ್ತಿದೆ.

ಸಕಲೇಶಪುರದ ಹೇಮಾವತಿ ನದಿ ತೀರದಲ್ಲಿರುವ ಶತಮಾನದಷ್ಟು ಹಳೆಯದಾದ ಹೊಳೆಮಲ್ಲೇಶ್ವರ ದೇವಸ್ಥಾನ ಭಾಗಶಃ ಮುಳುಗಡೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದೇವಾಲಯದೊಳಗೆ ಭಕ್ತರ ಪ್ರವೇಶವನ್ನು ಅಧಿಕಾರಿಗಳು ನಿರ್ಬಂಧಿಸಿದ್ದಾರೆ.

                       

Also Read  ಗೂನಡ್ಕ: ಡಾಕ್ಟರೇಟ್ ಪ್ರಶಸ್ತಿ ಪುರಸ್ಕೃತ ತಾಜುದ್ದೀನ್ ಟರ್ಲಿ ಹಾಗೂ NSUI ಕಾರ್ಯದರ್ಶಿಯಾಗಿ ನೇಮಕಗೊಂಡ ಉಬೈಸ್ ರವರಿಗೆ ಸನ್ಮಾನ ಕಾರ್ಯಕ್ರಮ

 

 

error: Content is protected !!
Scroll to Top