(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯಗಳಾದ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಎಸ್.ನಗರದಲ್ಲಿ ನಡೆದಿದೆ.
ಘಟನೆಯಲ್ಲಿ ಪತಿ, ಪತ್ನಿ ಹಾಗೂ ಮೂವರು ಮಕ್ಕಳಿಗೆ ಬೆಂಕಿ ತಗುಲಿ ಗಂಭೀರ ಸುಟ್ಟ ಗಾಯಗಳಾಗಿವೆ. ಪತಿ ಮದನ್ ಚೌಹಾರ (32), ಹೆಂಡತಿ ಪ್ರೇಮ್ ಜಾಲ (28), ಮಕ್ಕಳಾದ ಹಿರದ್ (12), ಪ್ರಶಾಂತ್ (6) ಹಾಗೂ ಅನಿತಾ (8) ಗಂಭೀರ ಗಾಯಗೊಂಡವರು ಎಂದು ಗುರುತಿಸಲಾಗಿದೆ.
ನೇಪಾಳ ಮೂಲದ ಈ ಕುಟುಂಬ ಬಾಡಿಗೆ ಮನೆಯಲ್ಲಿ ವಾಸವಿತ್ತು.ಎಲ್ಲರಿಗೂ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.