ಅಕ್ರಮ ಜಿಂಕೆ ಚರ್ಮ ಸಾಗಾಟ ► ಬೈಕ್ ಸಹಿತ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.18. ಮಂಗಳೂರು ಅರಣ್ಯ ಸಂಚಾರಿ ದಳದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು ಉಡುಪಿ ತಾಲೂಕಿನ ಸಾಸ್ತಾನ ಟೋಲ್ ಗೇಟ್ ನಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಅಕ್ರಮ ಸಾಗಾಟ ಮಾಡುತ್ತಿದ್ದ ಜಿಂಕೆ ಚರ್ಮವನ್ನು ವಶಕ್ಕೆ ಪಡೆದು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಸಾಗರದ ಮೋಹನ ಕುಮಾರ (22) ಮತ್ತು ಗಂಗೊಳ್ಳಿಯ ವಿಕ್ರಮ (24) ಎಂದು ಗುರುತಿಸಲಾಗಿದೆ.
ಕುಂದಾಪುರ ಕಡೆಯಿಂದ ಬರುತ್ತಿದ್ದ ಬೈಕಿನಲ್ಲಿ ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ಒಂದು ಜಿಂಕೆ ಚರ್ಮವನ್ನು ಮಾರಾಟಕ್ಕಾಗಿ ಸಾಗಾಟ ಮಾಡುತ್ತಿದು ದನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಪತ್ತೆ ಹಚ್ಚಿ ಮುಂದಿನ ತನಿಖೆಗಾಗಿ ಉಡುಪಿ ವಲಯ ಅರಣ್ಯಾಧಿಕಾರಿಯವರಿಗೆ ಹಸ್ತಾಂತರಿಸಲಾಗಿದೆ.

Also Read  ಪ.ಜಾ ಮತ್ತು ಪ.ಪಂಗಡದ ಜಾಗೃತಿ ಮತ್ತು ಉಸ್ತುವಾರಿ ಸಭೆ ಮುಂದೂಡಿಕೆ

error: Content is protected !!
Scroll to Top