(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ರಾಜ್ಯ ಕಾಂಗ್ರೆಸ್ ಸರ್ಕಾರದ ವಿವಿಧ ಹಗರಣಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸುವ ಕುರಿತು ಬಿಜೆಪಿ-ಜೆಡಿಎಸ್ ಪ್ರಮುಖರ ಸಭೆ ಬೆಂಗಳೂರಿನಲ್ಲಿ ನಡೆಯಿತು ಎಂದು ತಿಳಿದುಬಂದಿದೆ.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಜೆಡಿಎಸ್ ಮುಖಂಡ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪಕ್ಷದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಿರಿಯ ನಾಯಕರು ಭಾಗಿಯಾಗಿದ್ದರು. ಬಳಿಕ ಬಿ.ವೈ. ವಿಜಯೇಂದ್ರ, ರಾಜ್ಯ ಕಾಂಗ್ರೆಸ್ ಸರ್ಕಾರದ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಹಗರಣ ಹಾಗೂ ಮೈಸೂರಿನ ಮುಡಾ ಹಗರಣ, SEPTSP ಅನುದಾನವನ್ನು ಅನ್ಯ ಕಾರ್ಯಗಳಿಗೆ ಬಳಕೆ ವಿರೋಧಿಸಿ ಶೀಘ್ರವೇ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡಲು ನಿರ್ಧರಿಸಲಾಗಿದೆ ಎಂದರು.