(ನ್ಯೂಸ್ ಕಡಬ)newskadaba.com ನವದೆಹಲಿ, ಜು.29. ಕೋಚಿಂಗ್ ಸೆಂಟರ್ ನಲ್ಲಿ ಐಎಎಸ್ ಆಕಾಂಕ್ಷಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಚಿಂಗ್ ಸೆಂಟರ್‌ನ ಮಾಲೀಕ ಹಾಗೂ ನಿರ್ವಾಹಕರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕೋಚಿಂಗ್ ಸೆಂಟರ್ ಮಾಲೀಕ ಅಭಿಷೇಕ್ ಗುಪ್ತಾ ಮತ್ತು ನಿರ್ವಾಹಕ ದೇಶಪಾಲ್ ಸಿಂಗ್ ಅವರನ್ನು ದೆಹಲಿಯ ಮ್ಯಾಜಿಸ್ಟ್ರಿಯಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇವರಿಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.
