ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ



(ನ್ಯೂಸ್ ಕಡಬ)‌ newskadaba.com ಕಡಬ, ಜು.29. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.







ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಳಾರ ನಿವಾಸಿ ಮುಸ್ತಫಾ(33) ಎಂದು ಗುರುತಿಸಲಾಗಿದೆ. ಸೋಮವಾರದಂದು ಬೆಳಿಗ್ಗೆ ಮುಸ್ತಫಾ ಅವರನ್ನು ಹುಡುಕಾಡಿದಾಗ ಹಳೆ ಮನೆಯೊಂದರಲ್ಲಿ ಮೊಬೈಲ್ ರಿಂಗ್ ಆಗುತ್ತಿದ್ದು ಬಳಿಕ ಸ್ಥಳೀಯರು ಗಾಜು ಒಡೆದು ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಆತ್ಮಹತ್ಯೆ ಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೋಧನೆ ನಡೆಸಿದ್ದಾರೆ.






error: Content is protected !!
Scroll to Top