ರಾಜ್ಯದಲ್ಲಿ 17 ಸಾವಿರ ಗಡಿ ದಾಟಿದ ಡೆಂಗ್ಯೂ ಕೇಸ್ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನತೆ ಕಿಡಿ



(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಸೋಂಕಿನ ಅಬ್ಬರ ಹೆಚ್ಚಾಗಿದ್ದು, 320 ಮಂದಿಗೆ ಸೋಂಕು ದೃಢಪಟ್ಟಿದ್ದು ಇದರೊಂದಿಗೆ ರಾಜ್ಯದ ಒಟ್ಟಾರೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ 17 ಸಾವಿರ ಗಡಿ ದಾಟಿದೆ ಎನ್ನಲಾಗಿದೆ.






ನಿತ್ಯ ಸರಾಸರಿ 2,500 ಪರೀಕ್ಷೆ ನಡೆಸುತ್ತಿದ್ದ ಆರೋಗ್ಯ ಇಲಾಖೆಯು ಭಾನುವಾರ 1,630 ಮಂದಿಗೆ ಮಾತ್ರ ಪರೀಕ್ಷೆ ನಡೆಸಿದೆ. ಈ ಪೈಕಿ 320 ಮಂದಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 17,227ಕ್ಕೆ ಏರಿಕೆಯಾಗಿದೆ. 465 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಇದರಲ್ಲಿ 9 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.






error: Content is protected !!
Scroll to Top