ಗ್ಯಾಸ್ ಗೀಸರ್ ನ ರಾಸಾಯನಿಕ ಲೀಕ್ !! ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ಸ್ನಾನದ ಕೋಣೆಯ ಗ್ಯಾಸ್ ಗೀಸರ್ ನ ರಾಸಾಯನಿಕ ಲೀಕ್ ಆಗಿ ಯುವಕನೋರ್ವ ಉಸಿರುಗಟ್ಟಿ ಮೃತಪಟ್ಟ ಘಟನೆ ಮೂಡುಬಿದಿರೆಯ ಕೋಟೆಬಾಗಿಲಿನ ವಸತಿ ಸಂಕೀರ್ಣವೊಂದರಲ್ಲಿ ನಡೆದಿದೆ. ಮೃತಪಟ್ಟವರನ್ನು ಶಾರಿಕ್ (18) ಎಂದು ಗುರುತಿಸಲಾಗಿದೆ.


ಶಾರಿಕ್ ಸ್ನಾನಕ್ಕೆಂದು ತೆರಳಿದಾತ ಬಹಳ ಹೊತ್ತಾದರೂ ಹೊರ ಬಂದಿರುವುದಿಲ್ಲ. ಇದನ್ನು ಗಮನಿಸಿದ ಆತನ ಸಹೋದರ ಹೋಗಿ ನೋಡಿದಾಗ ಶಾರಿಕ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಗೀಸರ್ ನ ರಾಸಾಯನಿಕ ಹರಡಿದಾಗ ಶಾರಿಕ್ ಗೆ ಹೊರಬರಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗಿದೆ.

Scroll to Top