ಅಪಘಾತದಿಂದ ಮೆದುಳು ನಿಷ್ಕ್ರಿಯ..!   ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ 12ರ ಬಾಲಕಿ

(ನ್ಯೂಸ್ ಕಡಬ)newskadaba.com ತುಮಕೂರು, ಜು.29. 12 ವರ್ಷದ ಬಾಲಕಿಯೊಬ್ಬಳು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾಳೆ. ತನ್ನ ಅಂಗಾಂಗಳನ್ನು ದಾನ ಮಾಡುವ ಮೂಲಕ 6 ಜನರ ಜೀವಕ್ಕೆ ಬೆಳಕಾಗಿದ್ದಾಳೆ.

ತಿಪಟೂರು ನಗರದ ಹಳೇಪಾಳ್ಯದ ನಿವಾಸಿಯಾಗಿರುವ ಚಂದನ ಅಲ್ಲಿನ ಶ್ರೀ ವಿವೇಕಾನಂದ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಓದುತ್ತಿದ್ದಳು. ಜು.23ರಂದು ಶಾಲೆಗೆ ಹೋಗಿ ವಾಪಸ್ ಬರುವಾಗ ತಿಪಟೂರಿನಲ್ಲಿ ಅಪಘಾತವಾಗಿದೆ.

ರಸ್ತೆ ದಾಟುವಾಗ ಚಂದನಗೆ ಲಾರಿ ಡಿಕ್ಕಿ ಹೊಡೆದು ತಲೆಗೆ ಪೆಟ್ಟಾಗಿತ್ತು. ಪರಿಣಾಮ ಮೆದುಳು ನಿಷ್ಕ್ರಿಯಗೊಂಡಿತ್ತು. ಅಪಘಾತದ ಬಳಿಕ ಹಾಸನ ಮೆಡಿಕಲ್ ಕಾಲೇಜಿನಲ್ಲಿ ಚಂದನಾಗೆ ಚಿಕಿತ್ಸೆ ಕೊಡಿಸಲಾಗಿತ್ತು. ಆಕೊನೆಗೆ ಚಿಕಿತ್ಸೆ ಫಲಕಾರಿಯಾಗದೆ ಚಂದನ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

Also Read  ಮಂಗಳೂರು: ಗಾಂಜಾ ಸಾಗಟ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

 

 

 

 

error: Content is protected !!
Scroll to Top