(ನ್ಯೂಸ್ ಕಡಬ)newskadaba.com ಉಡುಪಿ, ಜು.30. ಪತಿಯ ಕಿರುಕುಳದಿಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪುಯಲ್ಲಿ ವರದಿಯಾಗಿದೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಕಮಾಲಾಕ್ಷಿ (34) ಎಂದು ಗುರುತಿಸಲಾಗಿದೆ.
ರಾಜು ಮದ್ಯಪಾನ ಮಾಡಿ ಹೆಂಡತಿಗೆ ಕಿರುಕುಳ ನೀಡುತ್ತಿದ್ದು, ಇದೇ ಚಿಂತೆಯಲ್ಲಿ ಮನನೊಂದ ಕಮಾಲಾಕ್ಷಿ ಮಧ್ಯಾಹ್ನ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ದೂರಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಆಕೆ, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ.
