(ನ್ಯೂಸ್ ಕಡಬ)newskadaba.com ಹಾಸನ, ಜು.30. ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಾಮೂಹಿಕ ಅತ್ಯಾಚಾರಿ ಎಂದು ಕರೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.
ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕರ್ನಾಟಕದಲ್ಲಿ ಸಾರ್ವಜನಿಕ ಭಾಷಣ ಮಾಡಿದ್ದ ರಾಹುಲ್ ಗಾಂಧಿಯವರು ಪ್ರಜ್ವಲ್ ಅವರನ್ನು ಸಾಮೂಹಿಕ ಅತ್ಯಾಚಾರಿ ಎಂದು ಉಲ್ಲೇಖಿಸಿದ್ದರು.
