ಅನಧಿಕೃತ ಫ್ಲೆಕ್ಸ್-ಬ್ಯಾನರ್ ಅಳವಡಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.30. ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಲ್ಲಾ ವಲಯ ಆಯುಕ್ತರಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೂಚನೆ ನೀಡಿದರು ಎಂದು ವರದಿ ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಸಭೆ ಉದ್ದೇಶಿಸಿ ಅವರು ಮಾತನಾಡಿದರು.


ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸುತ್ತಿದ್ದು, ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕಿದೆ. ಈ ನಿಟ್ಟಿನಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಎಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು ಎನ್ನಲಾಗಿದೆ.

Also Read  ಸುಳ್ಯ ಕೆಪಿಸಿಸಿ ಉಸ್ತುವಾರಿಯಾಗಿ ಮಮತಾ ಗಟ್ಟಿ ನೇಮಕ

error: Content is protected !!
Scroll to Top