ಮಂಗಳೂರು: ‘ಆಪರೇಷನ್ ಟೈಗರ್’ ಕಾರ್ಯಾಚರಣೆ…!    ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.30. ‘ಆಪರೇಷನ್ ಟೈಗರ್’ ಕಾರ್ಯಾಚರಣೆ ಇಂದು ಕೂಡ ಮುಂದುವರೆದಿದ್ದು, ಇದನ್ನು ಖಂಡಿಸಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿಗೆ ಬೀದಿ ಬದಿ ವ್ಯಾಪಾರಿಗಳು ಮುತ್ತಿಗೆ ಹಾಕಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಟೈಗರ್ ಕಾರ್ಯಾಚರಣೆ ನಿಲ್ಲಿಸಬೇಕು ಮತ್ತು ಬೀದಿಬದಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು ಆಯುಕ್ತರ ಕಚೇರಿ ಮುಂದೆ ಧರಣಿ ಆರಂಭಿಸಿದ್ದಾರೆ. ನಿನ್ನೆ ನಡೆದ ಟೈಗರ್ ಕಾರ್ಯಾಚರಣೆಯಲ್ಲಿ ತಳ್ಳುಗಾಡಿ, ಗೂಡಂಗಡಿಗಳು, ಸಾಮಗ್ರಿಗಳಿಗೆ ಹಾನಿ ಮಾಡಿದ್ದಲ್ಲದೆ ಆಹಾರ, ತಿಂಡಿತಿನಿಸುಗಳನ್ನು ನಾಶಪಡಿಸಿರುವುದರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.

Also Read  ಸಾಲ ಮರುಪಾವತಿಗೆ ಬ್ಯಾಂಕುಗಳು ರೈತರನ್ನು ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್

 

error: Content is protected !!
Scroll to Top