ವಿದ್ಯುತ್ ಸ್ಪರ್ಶಿಸಿ 6 ಜಾನುವಾರುಗಳು ಬಲಿ…!

(ನ್ಯೂಸ್ ಕಡಬ)newskadaba.com ಕೊಡಗು, ಜು.30. ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಹರಿದು 6 ಜಾನುವಾರು (ಹಸು, ಕರುಗಳು ) ಬಲಿ ಯಾಗಿರುವ ಘಟನೆ ಕೊಡಗಿನಲ್ಲಿ ವರದಿಯಾಗಿದೆ. ಜಾನುವಾರುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಈ ದುರ್ಘಟನೆ ಸಂಭವಿಸಿದೆ.


ಮೇಯಲು ಬಿಟ್ಟಿದ್ದ ಜಾನುವಾರುಗಳು ಸಂಜೆ 7 ಗಂಟೆಯಾದರೂ ಮನೆಗೆ ಹಿಂತಿರುಗದಿದ್ದಾಗ ಮಾಲೀಕರು ಜಾನುವಾರುಗಳು ಹುಡುಕಿಕೊಂಡು ಹೋಗಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಬಳಿಕ ಚಾಮುಂಡೇಶ್ವರಿ ವಿದ್ಯುಚ್ಛಕ್ತಿ ಸರಬರಾಜು ನಿಗಮದ (CESC) ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಘಟನೆ ಬಳಿಕ ಅಧಿಕಾರಿಗಳು ವಿದ್ಯುತ್ ತಂತಿಯಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು ಎನ್ನಲಾಗಿದೆ.

Also Read  ರಾಜ್ಯ ರಾಜಕಾರಣಕ್ಕೆ ಹಿಂತಿರುಗಿದ ಡಿ.ವಿ.ಸದಾನಂದ ಗೌಡ...!!!

error: Content is protected !!
Scroll to Top