(ನ್ಯೂಸ್ ಕಡಬ)newskadaba.com ಉಡುಪಿ, ಜು.31. ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡ ಘಟನೆ ಉಡುಪಿಯಲ್ಲಿ ವರದಿಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ದುರ್ಗಾಂಬಾ ಬಸ್, ಅಂಬಾಜಿ ಬಸ್ ನ ಹಿಂಬದಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ದುರ್ಗಾಂಬ ಬಸ್ ನ ಚಾಲಕ ಮತ್ತು ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
