(ನ್ಯೂಸ್ ಕಡಬ)newskadaba.com ಕುಂದಾಪುರ, ಜು.31. ಮನೆಯ ಕುಡಿಯುವ ನೀರಿನ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿದೆ ಎಂದು ತಿಳಿದುಬಂದಿದೆ.
ದಾರಿ ತಪ್ಪಿ ಬಂದ ಮೊಸಳೆ ಬಾವಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಬಾವಿಯ ಆವರಣ ಗೋಡೆ ತಗ್ಗಿನಲ್ಲಿರುವುದರಿಂದ ಮತ್ತು ಬಾವಿಯಲ್ಲಿ ನೀರು ತುಂಬಿರುವುದರಿಂದ ಆಕಸ್ಮಿಕವಾಗಿ ಮೊಸಳೆ ಬಾವಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳೀಯರು ಬೃಹತ್ ಮೊಸಳೆಯನ್ನು ವೀಕ್ಷಿಸಲು ಧಾವಿಸಿದ್ದಾರೆ.
ಅರಣ್ಯಾಧಿಕಾರಿಗಳು, ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳೀಯರ ಸಹಾಯದಿಂದ ಮೊಸಳೆಯನ್ನು ರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ. ಪಶುವೈದ್ಯರೂ ಸ್ಥಳಕ್ಕಾಗಮಿಸಿದ್ದಾರೆ ಎಂದು ತಿಳಿದು ಬಂದಿದೆ.