ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಎಲ್ಲಾ ಪೂರ್ವ ಸಿದ್ದತೆಗಳಿಗೆ ಕ್ರಮ…!     ಸಿಎಂ ಖಡಕ್ ಸೂಚನೆ 

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ರಾಜ್ಯದಲ್ಲಿಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.


ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿದ್ದು ಈ ಕುರಿತು ಸಹ ಜಿಲ್ಲಾಧಿಕಾರಿಗಳು ಎಚ್ಚರವಹಿಸುವಂತೆ ತಿಳಿಸಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವರು ಸಹ ಪ್ರವಾಹ ಪರಿಸ್ಥಿತಿಯ ನಿರ್ವಹಣೆಯ ಮೇಲ್ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ.

Also Read  ಮಂಗಳೂರು ವಿವಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಎಬಿವಿಪಿ ಯಿಂದ ಪ್ರತಿಭಟನೆ

error: Content is protected !!
Scroll to Top