(ನ್ಯೂಸ್ ಕಡಬ)newskadaba.com ಕೇರಳ, ಜು.31. ವಯನಾಡಿನಲ್ಲಿ ನಡೆದ ಭೂಕುಸಿತ ದುರಂತದಲ್ಲಿ ಈವರೆಗೆ ಅನೇಕ ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದೇ ಅಂತಿಮ ಅಂಕಿ-ಅಂಶವಲ್ಲ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಆತಂಕ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಯನಾಡಲ್ಲಿ ಪ್ರಕೃತಿ ಪ್ರಕೋಪ ಆಗಿದ್ದು, ನಸುಕಿನ ಜಾವ 2 ಗಂಟೆ ಸುಮಾರಿಗೆ ಮೊದಲ ಜಲ ಸ್ಫೋಟ ಸಂಭವಿಸಿತ್ತು. 4.10ಕ್ಕೆ ಎರಡನೇ ಸ್ಫೋಟ ಉಂಟಾಗಿತ್ತು. ಐವರು ಸಚಿವರು ಸತತವಾಗಿ ಕೆಲಸ ಮಾಡುತ್ತಿದ್ದಾರೆ. 18 ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ. 34 ಮೃತದೇಹಗಳ ಗುರುತುಪತ್ತೆಯಾಗಿದ್ದೆ. 128 ಮಂದಿ ಗಾಯಗೊಂಡಿದ್ದಾರೆ. ದುರಂತದಲ್ಲಿ 93 ಮಂದಿ ಸಾವನ್ನಪ್ಪಿದ್ದಾರೆ. ಕೆಲವು ಗುರುತು ಪತ್ತೆಹಚ್ಚಲು ಸಾಧ್ಯವಾಗದ ಮೃತದೇಹಗಳಿವೆ ಎಂದು ಸಿಎಂ ಪಿಣರಾಯಿ ಅಧಿಕೃತ ಮಾಹಿತಿ ನೀಡಿದ್ದಾರೆ.