ಲೋಕಸೇವಾ ಆಯೋಗದ ನೂತನ ಅಧ್ಯಕ್ಷೆಯಾಗಿ ಪ್ರೀತಿ ಸೂದನ್ ಆಯ್ಕೆ…! ಆಗಸ್ಟ್ 1ರಂದು ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.31. ಕೇಂದ್ರ ಲೋಕಸೇವಾ ಆಯೋಗದ ನೂತನ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಆಯ್ಕೆಯಾಗಿದ್ದು, ಆಗಸ್ಟ್ 1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.


1983ರ ಬ್ಯಾಚ್‌ನ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ವಿವಾದದ ಸಂದರ್ಭದಲ್ಲಿ ಯುಪಿಎಸ್‌ಸಿ ಮಾಜಿ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ ನೀಡಿದ ನಂತರ ಈ ಹುದ್ದೆ ಖಾಲಿಯಾಗಿತ್ತು. ಪ್ರೀತಿ ಸೂದನ್ ಕೇಂದ್ರದ ಮಾಜಿ ಆರೋಗ್ಯ ಕಾರ್ಯದರ್ಶಿಯಾಗಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ರಕ್ಷಣಾ ಸಚಿವಾಲಯದಲ್ಲಿಯೂ ಕೆಲಸ ಮಾಡಿದ್ದಾರೆ. ಅವರು ಏಪ್ರಿಲ್ 2025 ರವರೆಗೆ ಈ ಹುದ್ದೆಯಲ್ಲಿ ಇರುತ್ತಾರೆ.

Also Read  ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಕಾಡ್ಗಿಚ್ಚು ► ಅಪಾರ ಪ್ರಮಾಣದ ಅರಣ್ಯ ಪ್ರದೇಶ ಅಗ್ನಿಗಾಹುತಿ

error: Content is protected !!
Scroll to Top