ಮಂಗಳೂರು: ಭಾರಿ ಮಳೆಗೆ ಉರುಳಿ ಬಿದ್ದ ಬೃಹತ್ ಮರ…!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.31. ಸುರಿದ ಭಾರಿ ಮಳೆಗೆ ತಡರಾತ್ರಿ ಇತಿಹಾಸ ಪ್ರಸಿದ್ಧ ಗುಜ್ಜರಕೆರೆ ಬಳಿ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಘಟನೆ ನಡೆದಿದೆ.


ಘಟನಾ ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ನೀಡಿ ಅಗತ್ಯ ಕಾರ್ಯಾಚರಣೆಗೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದರು. ಮರ ಬಿದ್ದ ಪರಿಣಾಮ ಗುಜ್ಜರ ಕೆರೆಯ ಸುತ್ತಲೂ ಮಕ್ಕಳು ಹಾಗೂ ಹಿರಿಯರ ಸುರಕ್ಷತೆಯ ದೃಷ್ಟಿಯಿಂದ ಹಾಕಲಾಗಿದ್ದ ಸ್ಟಿಲ್ ರೇಲಿಂಗ್ ಮುರಿದಿದೆ. ಹೀಗಾಗಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

Also Read  ಮಂಗಳೂರು: ಮತದಾನದೋತ್ತರ ಘರ್ಷಣೆ ➤ 5 ಠಾಣಾ ವ್ಯಾಪ್ತಿಗಳಲ್ಲಿ ನಿಷೇಧಾಜ್ಞೆ ಜಾರಿ

error: Content is protected !!
Scroll to Top