ಮುಖ್ಯಮಂತ್ರಿಗಳ‌ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿಗೆ

(ನ್ಯೂಸ್ ಕಡಬ)newskadaba.com ದೆಹಲಿ, ಜು.31. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.


ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ.


ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಲಾಡ್ ತಿಳಿಸಿದ್ದಾರೆ.

error: Content is protected !!
Scroll to Top