(ನ್ಯೂಸ್ ಕಡಬ)newskadaba.com ನವದೆಹಲಿ, ಜು.31. ಹವಾಮಾನ ವೈಪರೀತ್ಯದಿಂದಾಗಿ ಭೂಕುಸಿತ ಪೀಡಿತ ವಯನಾಡು ಭೇಟಿಯನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮುಂದೂಡಿದ್ದಾರೆ.
ನಿರಂತರವಾಗಿ ಸುರಿಯುತ್ತಿರುವ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ವಯನಾಡಿಗೆ ತೆರಳುವುದು ಕಷ್ಟಕರವಾಗಿದೆ. ಆದಷ್ಟು ಬೇಗ ಜಿಲ್ಲೆಗೆ ಭೇಟಿ ನೀಡುವುದಾಗಿ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ. ಆದಷ್ಟು ಬೇಗ ವಯನಾಡಿಗೆ ಭೇಟಿ ನೀಡುತ್ತೇನೆ. ಈ ಮಧ್ಯೆ ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುವುದನ್ನು ಮುಂದುವರಿಸುತ್ತೇವೆ ಮತ್ತು ಅಗತ್ಯವಿರುವ ಎಲ್ಲಾ ನೆರವು ನೀಡುತ್ತೇವೆ ಎಂದು ತಿಳಿಸಿದ್ದಾರೆ.
