(ನ್ಯೂಸ್ ಕಡಬ)newskadaba.com ಮಂಗಳೂರು, ಜು.31. ಮಂಗಳೂರಿನ ಅರಣ್ಯ ಸಂಚಾರಿ ದಳದ ವತಿಯಿಂದ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ರೂ. 5.50 ಲಕ್ಷ ಮೌಲ್ಯದ ಅಕೇಶಿಯ, ಮ್ಯಾಂಜಿಯಮ್ ದಿಮ್ಮಿಗಳನ್ನು ವಾಹನ ಸಮೇತ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಮರಿಯಪ್ಪ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಅರಣ್ಯ ಸಂಚಾರಿದಳ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಕುಮಾರ್ ಪೈ ಅವರ ನೇತೃತ್ವದಲ್ಲಿ ಕಾರ್ಯಾಚರಣೆಯನ್ನು ನಡೆಸಲಾಯಿತು. ಈ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್, ಶಿವಾನಂದ ಮಾದರ, ನವೀನ ರಿಚರ್ಡ್ ಡಿ’ಸೋಜ ಹಾಗೂ ವಾಹನ ಚಾಲಕರಾದ ಜಯಪ್ರಕಾಶ ಭಾಗವಹಿಸಿದ್ದರು ಎನ್ನಲಾಗಿದೆ.