ಬಾಲಮಂದಿರದಿಂದ ಪರಾರಿಯಾಗಿ ಕಳ್ಳತನ 4 ಅಪ್ರಾಪ್ತರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಬಾಲಮಂದಿರದಿಂದ ತಪ್ಪಿಸಿಕೊಂಡು ಬಂದು ಮತ್ತೆ ಕಳ್ಳತನ ಮಾಡಿದ್ದ ನಾಲ್ವರು ಅಪ್ರಾಪ್ತರನ್ನು ಪೀಣ್ಯ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಸಂಬಂಧ ಅವರ ಪೋಷಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿದ್ದಾರೆ.


ಬಾಲಕರಿಂದ 4 ಲಕ್ಷ ರೂ. ಮೌಲ್ಯದ 30 ಗ್ರಾಂ ಚಿನ್ನದ ಸರ, 2 ದ್ವಿಚಕ್ರ ವಾಹನ ಹಾಗೂ 1 ಆಟೋರಿಕ್ಷಾ ವಶಕ್ಕೆ ಪಡೆಯಲಾಗಿದೆ. ಕೆಲ ದಿನಗಳ ಹಿಂದೆ ಕೆಂಪಯ್ಯ ಗಾರ್ಡನ್‌ ಬಳಿ ಮಹಿಳೆಯೊಬ್ಬರು ಬೆಳಗ್ಗೆ ಕೆಲಸಕ್ಕೆ ನಡೆದು ಹೋಗುತ್ತಿದ್ದಾಗ ದ್ವಿ-ಚಕ್ರ ವಾಹನದಲ್ಲಿ ಹಿಂಬಾಲಿಸಿದ ಬಾಲಕರು ಅಡ್ಡಗಟ್ಟಿ 30 ಗ್ರಾಂ ತೂಕದ ಚಿನ್ನದ ಸರ ಕಸಿದು ಪರಾರಿಯಾಗಿದ್ದರು ಎನ್ನಲಾಗಿದೆ.

error: Content is protected !!

Join the Group

Join WhatsApp Group