‘ವಯನಾಡಿನಲ್ಲಿ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ ಪರಿಹಾರ’      ಸಿಎಂ ಸಿದ್ದರಾಮಯ್ಯ ಘೋಷಣೆ  

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ. ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಕುರಿತು ಎಕ್ಸ್‌ ನಲ್ಲಿ ಹಂಚಿಕೊಂಡ ಸಿಎಂ, ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Also Read  ಬೆಳ್ತಂಗಡಿ : ಶಬರಿಮಲೆ ಯಾತ್ರಿಕರ ಬಸ್ ಬ್ರೇಕ್ ಫೇಲ್ ➤ ಹಲವರಿಗೆ ಗಾಯ

 

error: Content is protected !!
Scroll to Top