(ನ್ಯೂಸ್ ಕಡಬ)newskadaba.com ಕೊಡಗು, ಜು..31. ಮಳೆಯ ಅಬ್ಬರ ಮುಂದುವರಿದ್ದು, ಆಗಸ್ಟ್ 1 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧಿಸಲಾಗಿದೆ.
ಅತಿಯಾದ ಮಳೆಯಿಂದ ದುಬಾರೆ, ಹಾರಂಗಿ ಸಾಕಾನೆ ಶಿಬಿರಗಳನ್ನು ಎರಡು ದಿನಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಕುಶಾಲನಗರ ವಲಯ ಅರಣ್ಯಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ ಎಂದು ಕೊಡಗು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
