ಮಂಗಳೂರು: ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ     ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌            

(ನ್ಯೂಸ್ ಕಡಬ)newskadaba.com ಮಂಗಳೂರು, ಆ.01. ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಇತ್ತೀಚೆಗೆ ಜೈಲಿಗೆ ದಾಳಿ ನಡೆಸಿದಾಗ 25 ಮೊಬೈಲ್‌, ಗಾಂಜಾ ಸ್ಯಾಚೆಟ್‌ಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿರುವ 389 ವಿಚಾರಣಾಧೀನ ಕೈದಿಗಳ ಪೈಕಿ 110 ಮಂದಿಯನ್ನು ಡ್ರಗ್ಸ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 40 ಮಂದಿಯಲ್ಲಿ ಪಾಸಿಟಿವ್‌ ಬಂದಿದೆ ಎಂದು ತಿಳಿಸಿದ್ದಾರೆ.

Scroll to Top