(ನ್ಯೂಸ್ ಕಡಬ)newskadaba.com ಕಾರವಾರ, ಆ.01. ಶಿರೂರು ಗುಡ್ಡ ಕುಸಿತದ ನಂತರ ಸಂಚಾರ ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿ-66 ಅನ್ನು ಎರಡು ವಾರಗಳ ಬಳಿಕ ಮತ್ತೆ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುತ್ತಿದೆ ಎನ್ನಲಾಗಿದೆ.
ಈ ಸಂಬಂಧ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅವರು, ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಅವರಿಗೆ ಪತ್ರ ಬರೆದಿದ್ದು, ರಾಷ್ಟ್ರಿಯ ಹೆದ್ದಾರಿ ಸಂಚಾರಕ್ಕೆ ಮುಕ್ತಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
