(ನ್ಯೂಸ್ ಕಡಬ)newskadaba.com ನವದೆಹಲಿ, ಆ.01. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿಯೇ ಅತ್ಯಂತ ಹಿಂದುಳಿದ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ವರದಿ ತಿಳಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಏಳು ನ್ಯಾಯಾಧೀಶರ ಸಾಂವಿಧಾನಿಕ ಪೀಠ, SC, ST ಒಳ ಮೀಸಲಾತಿಗೆ ಒಪ್ಪಿಗೆ ನೀಡಿದೆ. ಹೆಚ್ಚು ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳು ಎಸ್‌ಸಿ ಮತ್ತು ಎಸ್‌ಟಿಗಳಲ್ಲಿಯೇ ಒಳ ಮೀಸಲಾತಿ ನೀಡಬಹುದು ಮತ್ತು ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಈ ಮೀಸಲಾತಿ ಜಾರಿಗೆ ತರಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.