ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸಿದ್ಧ      ಆಹಾರ ಸಚಿವ ಪ್ರಹ್ಲಾದ್ ಜೋಶಿ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.01. ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಆಹಾರ ಸಚಿವ ಪ್ರಹ್ಲಾದ್ ಜೋಶಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಅಕ್ಕಿಕೊಡಲು ಕೇಂದ್ರ ಸಿದ್ಧವಿದೆ. ಮನವಿ ಬಂದರೆ ಹೆಚ್ಚುವರಿ ಅಕ್ಕಿ ಕೊಡಲಿದ್ದೇವೆ. ಕೆಜಿಗೆ 28ರೂ.ನಂತೆ ನಾವು ಅಕ್ಕಿ ಕೊಡಲು ಸಿದ್ಧರಿದ್ದು, ಎಷ್ಟು ಬೇಕಾದರೂ ಅಕ್ಕಿಕೊಡಲಿದ್ದೇವೆ ಎಂದು ಹೇಳಿದ್ದಾರೆ. ಈ ಹಿಂದೆ ರಾಜ್ಯಕ್ಕೆ ಅಕ್ಕಿ ಕೊಡಲು ಕೇಂದ್ರ ಸುತರಾಂ ಒಪ್ಪಿರಲಿಲ್ಲ. ಇರುವ ಸ್ಟಾಕನ್ನೆಲ್ಲ ರಾಜ್ಯಕ್ಕೆ ಮಾರಾಟ ಮಾಡಿ ಖಾಲಿ ಮಾಡಿದರೆ ತುರ್ತು ಸಂದರ್ಭಗಳಲ್ಲಿ ವಿತರಣೆ ಮಾಡಲು ಕಷ್ಟ ಎಂಬುದು ಕೇಂದ್ರದ ವಾದವಾಗಿತ್ತು ಎನ್ನಲಾಗಿದೆ.

Also Read  ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಕೇಶ್ ಸಾವಂತ್ ಅರೆಸ್ಟ್‌...!

 

 

error: Content is protected !!
Scroll to Top