ರಾಜ್ಯದಲ್ಲಿ ಈ ವರ್ಷ 46 ಭೂಕುಸಿತ ಸಂಭವಿಸಿವೆ, 12 ಮಂದಿ ಸಾವು ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಅಪಾಯ ಎಂದ ತಜ್ಞರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ರಾಜ್ಯದಲ್ಲಿ ಈ ವರ್ಷ ಜುಲೈ ಅಂತ್ಯದವರೆಗೆ 46 ಭೂಕುಸಿತಗಳು ಸಂಭವಿಸಿವೆ ಮತ್ತು ಇದಕ್ಕೆ ಸಂಬಂಧಿತ ಘಟನೆಗಳಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ ತಜ್ಞರು ಮತ್ತು ಭೂವಿಜ್ಞಾನಿಗಳು ಮುಂಬರುವ ದಿನಗಳಲ್ಲಿ ಇನ್ನಷ್ಟು ಭೂಕುಸಿತ ಸಂಭವಿಸುವ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ(KNDMC) ಮತ್ತು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ(KSDMA)ವು ಕರ್ನಾಟಕದಲ್ಲಿ ಭೂಕುಸಿತಕ್ಕೆ ಒಳಗಾಗುವ ತಾಲ್ಲೂಕುಗಳ ಪಟ್ಟಿ ಮಾಡಿದೆ. ಇದರಲ್ಲಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಶಿವಮೊಗ್ಗ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಸೇರಿವೆ

Also Read  ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗದು ಕಳವು ಪ್ರಕರಣ ➤ ಆರೋಪಿಗಳಿಗೆ ನ್ಯಾಯಾಂಗ ಬಂಧನ

error: Content is protected !!
Scroll to Top