ದಕ್ಷಿಣ ಕನ್ನಡಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.02. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ನೆರೆ, ಸಾಕಷ್ಟು ಹಾನಿ ಉಂಟಾಗಿದೆ. ಈ ಹಿನ್ನೆಲೆ ಹಾನಿ ಪ್ರದೇಶಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಮಳೆ ಹಾನಿ ಪ್ರದೇಶಗಳ ಭೇಟಿ ನೀಡಿದ ನಂತರ ಸಚಿವರು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಮಳೆಹಾನಿ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ, ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ. ದ.ಕ ಜಿಲ್ಲಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ ಎನ್ನಲಾಗಿದೆ.

Also Read  ಮಂಗಳೂರು ವಿಶ್ವವಿದ್ಯಾನಿಲಯ ► ನಾಳೆ ನಡೆಯಬೇಕಾಗಿದ್ದ ಪದವಿ ಪರೀಕ್ಷೆಗಳ ಮುಂದೂಡಿಕೆ

 

 

error: Content is protected !!
Scroll to Top