ಪುತ್ತೂರು: ಗುಡ್ಡ ಕುಸಿತ     ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್  



(ನ್ಯೂಸ್ ಕಡಬ) newskadaba.com ಪುತ್ತೂರು, ಆ.02. ಗುಡ್ಡ ಕುಸಿದ ಪರಿಣಾಮ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿರುವ ಘಟನೆ ಮುಂಜಾನೆ ನಡೆದಿದೆ. ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ತಿಳಿದುಬಂದಿದೆ.





ಗುಡ್ಡ ಕುಸಿತ ಸಂಭವಿಸುವ ಸಮಯ ಯಾವುದೇ ವಾಹನ ಸಂಚಾರ ಇಲ್ಲದಿರುವುದರಿಂದ ಸಂಭವನೀಯ ಭಾರೀ ಅನಾಹುತ ತಪ್ಪಿದಂತಾಗಿದೆ. ಸದ್ಯ ಮಡಿಕೇರಿ ಹಾಗೂ ಮೈಸೂರು ಕಡೆಗೆ ಪ್ರಯಾಣಿಸುವವರಿಗೆ ಬದಲಿ ರಸ್ತೆಯಾಗಿ ಪುತ್ತೂರು ಸಿಟಿ ಮೂಲಕ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವರದಿ ತಿಳಿಸಿದೆ.






 

error: Content is protected !!
Scroll to Top