ಮಂಗಳೂರು: ವಿದ್ಯಾರ್ಥಿ‌ನಿಯ ಜೀವ ರಕ್ಷಣೆ ಮಾಡಿದ ಚಾಲಕ ನಿರ್ವಾಹಕರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು , ಆ.02.  ವಿದ್ಯಾರ್ಥಿ‌ನಿಯ ಜೀವ ರಕ್ಷಣೆ ಮಾಡಿದ ಚಾಲಕ ನಿರ್ವಾಹಕರಿಗೆ ಎಂ ಶಶಿಧರ ಹೆಗ್ಡೆ ನೇತೃತ್ವದಲ್ಲಿ ಚಿಲಿಂಬಿ ಆದರ್ಶನಗರದಲ್ಲಿ ಸನ್ಮಾನ ಮಾಡಲಾಯಿತು.

ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಎದೆನೋವು ಕಾಣಿಸಿಕೊಂಡಾಗ ತಕ್ಷಣ ಎಚ್ಚೆತ್ತ ಬಸ್‌ನ‌‌ ಚಾಲಕ ಮತ್ತು‌ ನಿರ್ವಾಹಕ ಪ್ರಯಾಣಿಕರಿದ್ದ ಬಸ್ ಅನ್ನು ಕೇವಲ ಆರು ನಿಮಿಷದಲ್ಲಿ ಆಸ್ಪತ್ರೆ ಬಾಗಿಲಿಗೆ ತೆಗೆದುಕೊಂಡು ಹೋಗಿ ವಿದ್ಯಾರ್ಥಿಯ ಪ್ರಾಣ ರಕ್ಷಣೆ ಮಾಡಿದ ಬಸ್ ಚಾಲಕ ನಿರ್ವಾಹಕರಾದ ಗಜರಾಜ್ ಕುಂದರ್ ಪೂಜಾರಿ, ಮಹೇಶ್ ಪೂಜಾರಿ,ಸುರೇಶ್ ಬಜ್ಪೆಯವರನ್ನು ಕಾರ್ಪೊರೇಟರ್ ಎಂ ಶಶಿಧರ ಹೆಗ್ಡೆಯವರ ನೇತೃತ್ವದಲ್ಲಿ ಚಿಲಿಂಬಿ ಆದರ್ಶನಗರದ ಆದರ್ಶ್ ಫ್ರೆಂಡ್ಸ್ ಅಸೋಸಿಯೇಶನ್ ವಠಾರದಲ್ಲಿ ಸನ್ಮಾನಿಸಲಾಯಿತು.

Also Read  ಅನಿಲ ಸೋರಿಕೆ ➤ ನಾಲ್ವರಿಗೆ ಗಾಯ

 

error: Content is protected !!
Scroll to Top