(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಆ.02. ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಕಾಲೇಜು ಪ್ರಾಧ್ಯಾಪಕರೊಬ್ಬರ ಸಾವಿಗೆ ಕಾರಣರಾದ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎನ್ನಲಾಗಿದೆ.
ಸಂಜೆ 6.30ರ ಸುಮಾರಿಗೆ ಅರ್ನಾಳ ಸಗ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಾಧ್ಯಾಪಕಿ ಆತ್ಮಜ ಕಸತ್(45) ಅವರು ದಿನದ ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆತ್ಮಜ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಕೆಲವು ಗಂಟೆಗಳ ನಂತರ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
