ಪತಿಯ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. 21 ವರ್ಷದ ಪತಿಯ ಕಿರುಕುಳ ತಾಳಲಾರದೆ 11 ತಿಂಗಳ ಮಗುವಿನ 17 ವರ್ಷ ವಯಸ್ಸಿನ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.


ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಗಂಗಮ್ಮನಗುಡಿ ಪೊಲೀಸರು ಪತಿಯನ್ನು ಬಂಧಿಸಿದ್ದಾರೆ. ಸಂತ್ರಸ್ತೆ ತನ್ನ ಪತಿ ಕೌಶಿಕ್ ನನ್ನು ಮನೆಯಿಂದ ಹೊರಗೆ ಕಳುಹಿಸಿದ ನಂತರ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

Scroll to Top