(ನ್ಯೂಸ್ ಕಡಬ) newskadaba.com ರಾಯಚೂರು, ಆ.02. ಮಟನ್ ಊಟ ಮಾಡಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ರಾಯಚೂರಿನ ಕಲ್ಲೂರು ಗ್ರಾಮದಲ್ಲಿ ನಡೆದಿದೆ. ವಿಷಾಹಾರ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಗಂಡ ಹೆಂಡತಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಭೀಮಣ್ಣ( 60), ಈರಮ್ಮ ( 57) ಮಲ್ಲೇಶ (21), ಪಾರ್ವತಿ ( 19) ಮೃತರು ಎಂದು ತಿಳಿದುಬಂದಿದೆ. ಮತ್ತೋರ್ವ ಮಗಳು ಮಲ್ಲಮ್ಮ (23) ಸ್ಥಿತಿ ಗಂಭೀರವಾಗಿದೆ.
ಮಾಂಸಾಹಾರ ಸೇವನೆ ಮಾಡಿದ್ದು, ಫುಡ್ ಪಾಯಿಸನ್ ನಿಂದ ಸಾವು ಸಂಭವಿಸಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಊಟ ಮಾಡಿ ಜಮೀನಿಗೆ ತೆರಳಿದ್ದರು. ಜಮೀನಿನಲ್ಲಿ ಕೆಲಸ ಮಾಡುವಾಗ ಹೊಟ್ಟೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹೇಳಲಾಗುತ್ತಿದೆ. ಸಾವಿನ ಬಗ್ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.