ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ.03. ಮನೆಯ ಬಾವಿಗೆ ಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತರನ್ನು ಬೆಳ್ತಂಗಡಿ ನಗರದ ಗುರುದೇವ ಕಾಲೇಜ್ ರಸ್ತೆಯಲ್ಲಿರುವ ಸೀಡ್ ಫಾರ್ಮ್ ಬಳಿ ಇರುವ ಮನೆಯ ಬಾವಿಗೆ ಬಿದ್ದು ಸುಮಾಲಿನಿ ಜೈನ್ (63) ಎಂದು ಗುರುತಿಸಲಾಗಿದೆ.


ಕೂಡಲೇ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್ ಜಲೀಲ್‌ ಹಾಗೂ ಅಲ್ಫಾಸ್ ಲಾಯಿಲ ಸೇರಿ ಬಾವಿಗೆ ಹಗ್ಗ ಹಾಕಿ ಮಹಿಳೆಯನ್ನು ಮೇಲಕ್ಕೆತ್ತಿದ್ದಾರೆ. ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top