ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ     ಲೋಪದೋಷ ಸರಿಪಡಿಸುವಂತೆ ಸುಪ್ರೀಂ ಸೂಚನೆ            

(ನ್ಯೂಸ್ ಕಡಬ) newskadaba.com ನವದೆಹಲಿ, ಆ.03. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಕುರಿತು ಸುಪ್ರೀಂ ಕೋರ್ಟ್ ಹಲವು ಮಾರ್ಗಸೂಚಿಗಳನ್ನು ನೀಡಿದ್ದು, ಲೋಪದೋಷಗಳನ್ನು ಆಮೂಲಾಗ್ರವಾಗಿ ಸರಿಪಡಿಸುವಂತೆ ತಜ್ಞರ ಸಮಿತಿಗೆ ಸೂಚಿಸಿದೆ.

ಪ್ರಶ್ನೆಪತ್ರಿಕೆ ಮುದ್ರಣದಿಂದ ಆರಂಭಿಸಿ ಪರೀಕ್ಷಾ ಕೇಂದ್ರಗಳಿಗೆ ತಲುಪುವ ವರೆಗೆ ಎಲ್ಲ ಎಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಅಗತ್ಯವಿರುವೆಡೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಇದು ಮುಂದಿನ ವರ್ಷಕ್ಕೆ ಮುಂದುವರಿಯಬಾರದು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಕೇಂದ್ರಕ್ಕೆ ಸೂಚಿಸಿದೆ

error: Content is protected !!

Join the Group

Join WhatsApp Group