ಮಲೆನಾಡು ಮತ್ತು ಕರಾವಳಿಯಲ್ಲಿ ಮಳೆ ಆರ್ಭಟ ಡ್ಯಾಂ ಗಳಿಗೆ ಭರ್ಜರಿ ನೀರು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ಕೊಡಗು ಹೊರತುಪಡಿಸಿ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ನದಿ ನೀರು ನುಗ್ಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭೂಕುಸಿತ ಕಂಡು ಬಂದಿದ್ದು, ಹಲವೆಡೆ ರಸ್ತೆ ಸಂಚಾರಕ್ಕೆ ಸಮಸ್ಯೆಯಾಗಿದೆ.


ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಸುಳ್ಯ ತಾಲೂಕು, ಉಡುಪಿಯ ಬೈಂದೂರು ವ್ಯಾಪ್ತಿಯಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆ ಕೆಲಗ್ರಾಮಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು ಎನ್ನಲಾಗಿದೆ.

error: Content is protected !!

Join the Group

Join WhatsApp Group