ಕರ್ನಾಟಕದಲ್ಲಿ 4398 ಸರ್ಕಾರಿ ಶಾಲೆಗಳಿಗೆ ಮುಚ್ಚುವ ಆತಂಕ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ರಾಜ್ಯದಲ್ಲಿರುವ 46 ಸಾವಿರ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪೈಕಿ ಸುಮಾರು 18 ಸಾವಿರ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ 30 ದಾಟಿಲ್ಲ. ಆಶ್ಚರ್ಯವೆಂದರೆ ಈ ಪೈಕಿ 4300 ಕ್ಕೂ ಹೆಚ್ಚು ಶಾಲೆಗಳಲ್ಲಿ 10ಕ್ಕಿಂತ ಕಡಿದು ಮಕ್ಕಳಿದ್ದಾರೆ. ಇದರಲ್ಲಿ ಶೂನ್ಯ ದಾಖಲಾತಿಯ ಶಾಲೆಗಳೂ ಇವೆ.


ಇದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಇತ್ತೀಚೆಗೆ ಮುಕ್ತಾಯಗೊಂಡ ಮುಂಗಾರು ಅಧಿವೇಶನದಲ್ಲಿ ಮಂಡಿಸಿರುವ ಅಧಿಕೃತ ಮಾಹಿತಿ. ಈ ಹಿಂದೆ 10ಕ್ಕಿಂತ ಕಡಿಮೆ ಮಕ್ಕಳಿರುವ ಶಾಲೆಗಳನ್ನು ಸಮೀಪದ ಮತ್ತೊಂದು ಶಾಲೆಯಲ್ಲಿ ವಿಲೀನ ಮಾಡುವ ಮೂಲಕ ಒಂದು ಶಾಲೆಯನ್ನು ಸರ್ಕಾರ ಶಾಶ್ವತವಾಗಿ ಮುಚ್ಚುತ್ತಿತ್ತು. ಹೀಗಾಗಿ ಇದೀಗ 4300 ಶಾಲೆಯ ವಿದ್ಯಾರ್ಥಿಗಳು, ಪೋಷಕರಿಗೆ ಅದೇ ಆತಂಕ ಎದುರಾಗಿದೆ.

error: Content is protected !!
Scroll to Top