ಬಾಹ್ಯಾಕಾಶ ಯಾನಕ್ಕೆ ಇಬ್ಬರ ಹೆಸರು ಖಚಿತ ಪಡಿಸಿದ ಇಸ್ರೋ ಒಪ್ಪಂದಕ್ಕೆ ಸಹಿ ಹಾಕಿದ ಅಮೆರಿಕದ ಕಂಪೆನಿ..!

(ನ್ಯೂಸ್ ಕಡಬ) newskadaba.com ನವದೆಹಲಿ, ಆ.03. ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದ ಸಹಯೋಗದಲ್ಲಿ ಭಾರತ ಕೈಗೊಳ್ಳಲು ಉದ್ದೇಶಿಸಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಯಾತ್ರೆಯಲ್ಲಿ ಪಾಲ್ಗೊಳ್ಳಲಿರುವ ಇಬ್ಬರು ಭಾರತೀಯ ಗಗನಯಾತ್ರಿಗಳ ಹೆಸರನ್ನು ಇಸ್ರೋ  ಬಹಿರಂಗಪಡಿಸಿದೆ.


ಈ ವರ್ಷಾಂತ್ಯದಲ್ಲಿ ನಡೆಯಲಿದೆ ಎನ್ನಲಾಗಿರುವ ಪ್ರವಾಸ ಸಂಬಂಧ ಇಸ್ರೋ ಮತ್ತು ಅಮೆರಿಕದ ಆ್ಯಕ್ಸಿಯೋಂ ಸ್ಪೇಸ್‌ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿವೆ. ಒಪ್ಪಂದದ ಅನ್ವಯ ಆ್ಯಕ್ಸಿಯೋಂ ಸ್ಪೇಸ್ ಕಂಪನಿ ‘ಆ್ಯಕ್ಸಿಯೋಂ-4’ ಮಿಷನ್‌ ಮೂಲಕ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಲಿದೆ.

Scroll to Top