(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಳಿಬಂದಿರುವ ಮುಡಾ ಅಕ್ರಮ ವಿರುದ್ಧ ಹೋರಾಟಕ್ಕಿಳಿದಿರುವ ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರಿಗೆ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಅದಕ್ಕೆ ಟಕ್ಕರ್ ಕೊಡಲು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಮನಗರದಲ್ಲಿ ಇಂದು ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮ ನಡೆಯಲಿದೆ ಎನ್ನಲಾಗಿದೆ.
ರಾಮನಗರದಲ್ಲಿ ಸಭೆ, ನಾಳೆ ಚನ್ನಪಟ್ಟಣ, ಆಗಸ್ಟ್ 5 ಮದ್ದೂರು, ಆಗಸ್ಟ್ 6 ಮಂಡ್ಯ, ಆಗಸ್ಟ್ 9ರಂದು ಮೈಸೂರಿನಲ್ಲಿ ಬಹಿರಂಗ ಸಮಾರೋಪ ಸಭೆ ನಡೆಸಲಿದ್ದೇವೆ. ಬಿಜೆಪಿ, ಜೆಡಿಎಸ್ ವಿರುದ್ಧ ನಾವು ಯಾವುದೇ ಪಾದಯಾತ್ರೆ ನಡೆಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಈಗಾಗಲೇ ತಿಳಿಸಿದ್ದಾರೆ.