‘ರಾಜ್ಯ ಸರಕಾರ ದ.ಕ. ಜಿಲ್ಲೆಗೆ 300 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು’          ವೇದವ್ಯಾಸ ಕಾಮತ್             

(ನ್ಯೂಸ್ ಕಡಬ) newskadaba.com ಮಂಗಳೂರು, ಆ.03.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದ್ದು ಅಪಾರ ಪ್ರಮಾಣದ ಸೊತ್ತು ನಷ್ಟ ಉಂಟಾಗಿದೆ. ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ರಾಜ್ಯ ಸರಕಾರ 300 ಕೋಟಿ ರೂ. ವಿಶೇಷ ಪರಿಹಾರ ಘೋಷಣೆ ಮಾಡಬೇಕೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಪತ್ರಿಕಾಗೋಷ್ಟಿಯಲ್ಲಿ ಒತ್ತಾಯಿಸಿದರು.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದಾಗಿ ಹಲವು ಮನೆಗಳು ಕುಸಿದಿದ್ದು ಮನೆಗಳ ಮೇಲೆ ಮರಗಳು ಉರುಳಿಬಿದ್ದು ಸುಮಾರು 300 ಕೋಟಿಗೂ ಅಧಿಕ ಹಾನಿ ಉಂಟಾಗಿದೆ. ಜಿಲ್ಲೆಯಲ್ಲಿ ಮನೆಹಾನಿ, ಕೃಷಿ ಹಾನಿ ವ್ಯಾಪಾಕವಾಗಿದ್ದು ಮುಖ್ಯಮಂತ್ರಿ ಅವರು ತಕ್ಷಣವೇ ಈ ಬಗ್ಗೆ ಕ್ರಮ ಕೈಗೊಂಡು ಪರಿಹಾರ ಒದಗಿಸಬೇಕು ಎಂದು ಹೇಳಿದರು ಎನ್ನಲಾಗಿದೆ.

Also Read  ಭಾರತೀಯ ಅಂಚೆ ಇಲಾಖೆ : "ಪ್ರೀತಿಯ ಬಾಪು, ನೀವು ಅಮರ" ➤ ಅಂಚೆ ಇಲಾಖೆ ಪತ್ರ ಬರಹ ಸ್ಪರ್ಧೆ

 

error: Content is protected !!
Scroll to Top