‘ಮಳೆಗೆ ಅನಧಿಕೃತ ಮನೆಗಳಿಗೆ ಹಾನಿಯಾದರೂ ಪರಿಹಾರ ನೀಡುತ್ತೇವೆ’ ಮಧು ಬಂಗಾರಪ್ಪ                 

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ.03. ಮಳೆಯಿಂದಾಗಿ ಅನಧಿಕೃತ ಮನೆಗಳು ಬಿದ್ದರೂ 1.25 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ 5 ಲಕ್ಷ ರೂ. ಪರಿಹಾರ ಕೊಡುತ್ತಾರೆ ಅಂತಾ ಅವರೇ ಮನೆ ಕೆಡವಿಕೊಂಡರು. ಆದರೆ ಈ ಬಾರಿ ಮನೆ ಬಿದ್ದವರಿಗೆ ಪೂರ್ತಿ ಮನೆ ಕಟ್ಟಿ ಕೊಡುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.

ವಾಲ್ಮೀಕಿ ನಿಗಮ ಹಗರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸಭೆಯೊಳಗೆ ಹಾಗೂ ಹೊರಗೂ ಹೇಳಿದ್ದಾರೆ. ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

Also Read  ರಿವರ್ ಫೆಸ್ಟಿವಲ್ ಲೋಗೋ ಬಿಡುಗಡೆ ► ಜನವರಿ 12 ಮತ್ತು 13ರಂದು ಮೂರು ಕಿನಾರೆಗಳಲ್ಲಿ ರಿವರ್ ಫೆಸ್ಟಿವಲ್

 

error: Content is protected !!
Scroll to Top