ಬ್ಲಾಕ್‌ಮೇಲರ್‌ ಎಂದು ಕರೆದಿದ್ದಕ್ಕೆ ಸಿದ್ದರಾಮಯ್ಯ ಸಾರ್ವಜನಿಕ ಕ್ಷಮೆ ಕೋರಬೇಕು       ಟಿ ಜೆ ಅಬ್ರಹಾಂ                             

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನನ್ನು ಬ್ಲಾಕ್‌ಮೇಲರ್ ಎಂದು ಕರೆದಿದ್ದಕ್ಕಾಗಿ ಲೀಗಲ್ ನೋಟಿಸ್ ಜಾರಿ ಮಾಡುವುದಾಗಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಹೇಳಿದ್ದಾರೆ.

ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಮೈಸೂರಿನಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮದ ಮುಂದೆ ನನ್ನನ್ನು ಬ್ಲ್ಯಾಕ್‌ಮೇಲರ್ ಎಂದು ಕರೆದಿದ್ದಾರೆ. ಈ ಹೇಳಿಕೆಯಿಂದ ನನಗೆ ನೋವಾಗಿದೆ ಮತ್ತು ಮಾನಹಾನಿಯಾಗಿದೆ ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿ ಮತ್ತು ಸಾರ್ವಜನಿಕ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಾನು ನಿಮ್ಮ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸುತ್ತೇನೆ” ಎಂದು ಎಚ್ಚರಿಕೆ ನೀಡಿದ್ದಾರೆ.

Also Read  ಮಂಗಳೂರು: ನಾಲ್ವರ ಹಂತಕ ಪ್ರವೀಣ್ ಬಿಡುಗಡೆಗೆ ಸಿದ್ದತೆ ➤ ಸಂತ್ರಸ್ತರಿಂದ ಆಕ್ಷೇಪ

 

 

error: Content is protected !!
Scroll to Top